ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Vijayanagara Vani
ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ರಾಯಚೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರಬಾಬು ಅವರು ಸಸಿ ಎಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಶಾಕೀರ ಮೊಯಿನುದ್ದಿನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಕುಟುಂಬ ಕಲ್ಯಾಧಿಕಾರಿ ಡಾ.ಶಿವಕುಮಾರ, ಜಿಲ್ಲಾ ಕುಷ್ಠ ರೋಗ ನಿಮೂಲನಾ ಅಧಿಕಾರಿ ಡಾ.ಯಶೋಧಾ, ಜಿಲ್ಲಾ ಮಾನಸಿಕ ವಿಭಾಗದ ಮನೋವೈದ್ಯರಾದ ಡಾ.ಮನೋಹರ ಪತ್ತಾರ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಡಾ.ವೆಂಕಟೇಶ ಸೇರಿದಂತೆ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಕಚೇರಿಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article
error: Content is protected !!