ಬಳ್ಳಾರಿ,ಡಿ.26
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನ ಅಂಗವಾಗಿ “ವಿಶ್ವಮಾನವ ದಿನಾಚರಣೆ” ಕಾರ್ಯಕ್ರಮವನ್ನು ಡಿ.29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಆಲಂಭಾಷ ಅವರು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ರಾಘವೇಂದ್ರ ಗುಡದೂರು ತಂಡದಿoದ ಸುಗಮ ಸಂಗೀತ ಇರಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.