ಬಳ್ಳಾರಿ,ಜು.09
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ವಿಭಾಗ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಜು.11 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆ ಆವರಣದ ಡಿಎನ್ಬಿ ಸಭಾಂಗಣದಲ್ಲಿ ‘ಅಭಿವೃದ್ಧಿ ಹೊಂದಿದ ಭಾರತದ ಹೊಸ ಗುರುತಿಗಾಗಿ ಕುಟುಂಬ ಯೋಜನೆ ಅಳವಡಿಕೆ ಪ್ರತಿ ದಂಪತಿಗಳ ಹೆಮ್ಮೆ’ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟನೆ ಮಾಡುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ.ನವೀನ್ ಭಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ.ಜಿ.ಎನ್ ಶ್ರೀನಿವಾಸ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ ಬಾಬು, ವಿಮ್ಸ್ನ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ಅಬ್ದುಲ್ಲಾ ಸೇರಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು.
ವೇದಿಕೆ ಕಾರ್ಯಕ್ರಮಕ್ಕು ಮುನ್ನ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಗೃತಿ ಜಾಥಾ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.