ಬಳ್ಳಾರಿ,ಸೆ.26
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಹಾಗೂ ಹೋಟೆಲ್ ಮಾಲೀಕರ ಸಂಘ ಇವರ ಸಹಯೋಗದೊಂದಿಗೆ ಸೆ.27 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸೆ.26 ರಂದು ಬೆಳಿಗ್ಗೆ 07 ಗಂಟೆಗೆ ನಗರದ ಐತಿಹಾಸಿಕ ಕೋಟೆ ಪ್ರವೇಶ ದ್ವಾರದಿಂದ ಬಳ್ಳಾರಿ ಕೋಟೆಯ ಪಾರಂಪರಿಕಾ ನಡಿಗೆ ಆಯೋಜಿಸಲಾಗಿದೆ.
ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಪರಿಷÀತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ದೀಪ ಚೋಳನ್, ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಅಕ್ರಂ ಪಾಷ ಅವರು ಭಾಗವಹಿಸುವರು.
ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ.ಎಸ್ ತಳಕೇರಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.