Ad image

ಯುವಪೀಳಿಗೆ ಕೌಶಲ್ಯವಂತರಾಗಿ ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳಬೇಕು: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

Vijayanagara Vani
ಯುವಪೀಳಿಗೆ ಕೌಶಲ್ಯವಂತರಾಗಿ ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳಬೇಕು: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

ಬಳ್ಳಾರಿ,ನ.06

- Advertisement -
Ad imageAd image

ಯುವಪೀಳಿಗೆಯು ಕೌಶಲ್ಯವಂತರಾಗಿ ಸಾಮಾಜಿಕ ಮತ್ತು ಆರ್ಥಿಕ ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳಲು ಕಲಿತ ವಿದ್ಯೆಗೆ ಕೌಶಲ್ಯ ಅತ್ಯಗತ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯ ಯೋಜನೆಯಡಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸ್ಕಿಲ್ ಡೆವಲಪ್‌ಮೆಂಟ್ ಕಾಮರ್ಸ್ ಸೆಂಟರ್‌ನಲ್ಲಿ ಪದವೀಧರರಿಗಾಗಿ ಎರಡು ತಿಂಗಳ ಉಚಿತ `ಟ್ಯಾಲಿ ಪ್ರೆöÊಂ’ ಕೌಶಲ್ಯಪೂರ್ಣ ತರಬೇತಿ ನೀಡುವ ನೂತನ ಬ್ಯಾಚ್‌ಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ಪದವೀಧರರು ತರಗತಿಯಲ್ಲಿ ಕಲಿತ ಜ್ಞಾನಕ್ಕೂ ಮತ್ತು ಉದ್ಯಮದಲ್ಲಿಯ ಅಗತ್ಯಗಳಿಗೂ ಸಾಕಷ್ಟು ಅಂತರವಿದೆ. ಈ ಅಂತರವನ್ನು ಕಡಿಮೆ ಮಾಡಲು ಕೌಶಲ್ಯ ತರಬೇತಿಯ ಅಗತ್ಯವಿದೆ. ಈ ನಿಟ್ಟಿನಲ್ಲಿ ವೃತ್ತಿಯಲ್ಲಿನ ದೈನಂದಿನ ಅಗತ್ಯಗಳಿಗೆ ಪೂರಕವಾದ ಕೌಶಲ್ಯ ತರಬೇತಿ. ಜ್ಞಾನ ಮತ್ತು ತಂತ್ರಜ್ಞಾನದ ಬಳಕೆಯ ತರಬೇತಿಯನ್ನು ನೀಡಲಾಗುತ್ತಿದ್ದು, ಶಿಬಿರಾರ್ಥಿಗಳು ಟ್ಯಾಲಿ ಬಳಕೆಯ ಕೌಶಲ್ಯವನ್ನು ಪರಿಣಿತರಿಂದ ಪಡೆದು, ಸುಲಭವಾಗಿ ಉದ್ಯೋಗವಕಾಶ ಹೊಂದಬಹುದು ಎಂದು ಹೇಳಿದರು.
ತಂತ್ರಜ್ಞಾನ ಪ್ರತಿ ಕ್ಷೇತ್ರದ ಅವಿಭಾಜ್ಯವಾಗಿದೆ. ತಂತ್ರಜ್ಞಾನದ ಆವಿಷ್ಕಾರಗಳು ದಿನೇ ದಿನೇ ಬದಲಾಗುತ್ತಿವೆ. ತಂತ್ರಜ್ಞಾನದ ಬಳಕೆ ಇಲ್ಲದೇ ಇರಲು ಸಾಧ್ಯವಿಲ್ಲ ಎನ್ನುವ ಸ್ಥಿತಿಯಲ್ಲಿ ವಿಶ್ವವಿದೆ. ಇಂತಹ ಸಂದರ್ಭದಲ್ಲಿ ಯುವಶಕ್ತಿಯು ಸಂಪ್ರದಾಯಬದ್ಧ ಪರಿಣಿತಿಯ ಜೊತೆಯಲ್ಲಿ ಕೌಶಲ್ಯಪೂರ್ಣ ಪರಿಣಿತಿಯನ್ನು ಪಡೆದಲ್ಲಿ ಸುಲಭವಾಗಿ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದು ತಿಳಿಸಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ಮಾತನಾಡಿ, ಯುವಪೀಳಿಗೆಯನ್ನು ಸಾಮಾಜಿಕವಾಗಿ-ಆರ್ಥಿಕವಾಗಿ ಮತ್ತು ಕೌಶಲ್ಯಪೂರ್ಣವಾಗಿ ಭವಿಷ್ಯದ ಪೀಳಿಗೆಗೆ ಸಮರ್ಥರನ್ನಾಗಿ ರೂಪಿಸುವಲ್ಲಿ ಬಳ್ಳಾರಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಆಸಕ್ತರಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಿದೆ ಎಂದರು.
ಕೈಗಾರಿಕೋದ್ಯಮಿಗಳು ಮತ್ತು ವ್ಯಾಪಾರಿಗಳ ನಮ್ಮ ಸಂಸ್ಥೆಯ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್, ರೈತಣ್ಣ ಊಟ, ರೈತಣ್ಣ ಕ್ಲಿನಿಕ್ ಸಂಸ್ಥೆಯ ಜನಸೇವೆ ಹಾಗೂ ಸಮಾಜಸೇವೆಯ ಬದ್ಧತೆ ತೋರುತ್ತದೆ. ನಮ್ಮ ಸ್ಕಿಲ್‌ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ ಕೌಶಲ್ಯಪೂರ್ಣ ತರಬೇತಿ ಪಡೆದವರಿಗೆ ಉದ್ಯೋಗಗಳು ಸುಲಭವಾಗಿ ಸಿಗುತ್ತಿವೆ ಎಂದರು.
ಮಾಜಿ ಅಧ್ಯಕ್ಷ ಸಿ.ಶ್ರೀನಿವಾಸ್ ರಾವ್ ಅವರು ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯಪೂರ್ಣ ತರಬೇತಿ ಪಡೆದು ಜ್ಞಾನದ ಜೊತೆಯಲ್ಲಿ ಜೀವನಶೈಲಿಯನ್ನು ಉನ್ನತೀಕರಣಗೊಳಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ.ಮರ್ಚೇಡ್ ಮಲ್ಲಿಕಾರ್ಜುನಗೌಡ, ಗೌರವ ಕಾರ್ಯದರ್ಶಿ ಕೆ.ಸಿ.ಸುರೇಶ್‌ಬಾಬು, ಹಿರಿಯ ಉಪಾಧ್ಯಕ್ಷ ಅವ್ವಾರು ಮಂಜುನಾಥ, ಉಪಾಧ್ಯಕ್ಷರುಗಳಾದ ಎಸ್.ದೊಡ್ಡನಗೌಡ, ಮಾಜಿ ಅಧ್ಯಕ್ಷ ಸಿ.ಶ್ರೀನಿವಾಸ್ ರಾವ್, ನಾಗಳ್ಳಿ ರಮೇಶ್, ಕಾರ್ಯಕಾರಿ ಸಮಿತಿ ಸದಸ್ಯರು, ಇತರೆ ಗಣ್ಯರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Share This Article
error: Content is protected !!
";